ಯುಪಿಎಸ್‍ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ

ಬೆಂಗಳೂರು, ಆಗಸ್ಟ್ 07 ( ಕರ್ನಾಟಕ ವಾರ್ತೆ ) : ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ವಾಸವಿ ಅಕಾಡೆಮಿ ಬೆಂಗಳೂರು ಇವರ ಆಶ್ರಯದಲ್ಲಿ 2022 ರಲ್ಲಿ ಯುಪಿಎಸ್‍ಸಿ ಪರೀಕ್ಷೆಗಳಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪದವಿ ಮುಗಿಸಿರಬೇಕು ಅಥವಾ ಪದವಿಯ ಅಂತಿಮ ಸೆಮಿಸ್ಟರ್‍ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಸಲು ಆಗಸ್ಟ್ 12, 2021 ಕೊನೆಯ ದಿನಾಂಕವಾಗಿದೆ.

ಅರ್ಜಿಗಳ ಸ್ವೀಕೃತಿ ದಿನಾಂಕ ಮುಗಿದ ನಂತರ ಪ್ರವೇಶ ಪರೀಕ್ಷೆಗಳನ್ನು ವಾಸವಿ ಅಕಾಡೆಮಿ ವತಿಯಿಂದ ನಡೆಸಿ ಗರಿಷ್ಠ 100 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ಅನುಭವಿಗಳಿಂದ ಮಾರ್ಗದರ್ಶನ ನೀಡಲಾಗಿರುತ್ತದೆ.

ಕೋಚಿಂಗ್ ಶಿಕ್ಷಣ ಮಾಧ್ಯಮ ಇಂಗ್ಲೀಷ್ ಭಾಷೆಯಲ್ಲಿರುತ್ತದೆ. ಆಸಕ್ತ ವಿದ್ಯಾರ್ಥಿಗಳು  www.vasaviacdemy.com     ಗೆ ಭೇಟಿ ನೀಡಿ ಪ್ರವೇಶ ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8073499217 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *