ವಿಜಯನಗರ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ದಿನಾಚರಣೆ

 ಬಳ್ಳಾರಿ ಸೆ 24.ವಿಜಯನಗರ ಮಹಾವಿದ್ಯಾಲಯದಲ್ಲಿ ದಿನಾಂಕ 24.09.2021 ರಂದು ಎನ್.ಎಸ್.ಎಸ್ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಥಮ ಪಿಯುಸಿಯ ಕುಮಾರಿ ಅನುಷಾ ಪ್ರಾರ್ಥನೆಯನ್ನು ಹಾಡಿದರು. 

ಸ್ವಾಗತವನ್ನು ಪದವಿ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿಗಳಾದ ಮಧುಕರ್ ಸೊಪ್ಪಿನ್ ಅವರು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ. ವಿ.ಎಸ್. ಪ್ರಭಯ್ಯ ವಹಿಸುವುದರೊಂದಿಗೆ ಎನ್‌ಎಸ್‌ಎಸ್ ಪ್ರತಿಜ್ಞಾವಿಧಿಯನ್ನು ಬೋಧಿಸಿದರು ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ  ಅಸುಂಡಿ ಬಿ. ನಾಗರಾಜ ಗೌಡರು ಸಸಿಗಳಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. 

ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಸುಜಾತ ಬೆಳ್ಳಿಗುಂಡಿ ಉಪಸ್ಥಿತರಿದ್ದರು. ಅಲ್ಲದೇ ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಉಪನ್ಯಾಸಕರಾದ ಬಿ.ಚಂದ್ರಶೇಖರಪ್ಪ , ಸುಭಾಷ್, ಕರಿಬಸಯ್ಯ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಭಾಗವಹಿಸಿದ್ದರು. ನಿರೂಪಣೆಯನ್ನು ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿಗಳಾದ  ಮಲ್ಲಿಕಾರ್ಜುನ ಗೌಡರು ನಡೆಸಿ ಕೊಟ್ಟರು. ಕೊನೆಯಲ್ಲಿ ವಂದನಾರ್ಪಣೆಯನ್ನು ದೈಹಿಕ ಶಿಕ್ಷಣ ನಿರ್ದೇಶಕರಾದ  ಶಿವಕುಮಾರ್ ಮಾಡಿದರು.

advertisement

Leave a Reply

Your email address will not be published. Required fields are marked *