SSLC ಪೂರಕ ಪರೀಕ್ಷಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಉಚಿತ ಪ್ರಯಾಣಕ್ಕೆ ಅನುಮತಿ

ಬೆಂಗಳೂರು, ಸೆಪ್ಟೆಂಬರ್ 25, (ಕರ್ನಾಟಕ ವಾರ್ತೆ) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ರಿಯಾಯಿತಿ ಪಾಸುಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ.

ಸಂಸ್ಥೆಯು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ದಿನಾಂಕ:27.09.2021 & 29.09.2021 ಪರೀಕ್ಷಾ ದಿನಾಂಕಗಳಂದು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರ (ಅಡ್ಮೀಷನ್ ಟಿಕೇಟ್) ಅಥವಾ 2020-21ನೇ ಸಾಲಿನ ವಿದ್ಯಾರ್ಥಿ ಪಾಸನ್ನು ತೋರಿಸಿ ಬೆಂ.ಮ.ಸಾ.ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು  ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಎಂ.ಟಿ.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *