ಬೆಂಗಳೂರು-ಶಿರಡಿ ಮಾರ್ಗದಲ್ಲಿ ಅಂಬಾರಿ ಡ್ರೀಮ್ ಕ್ಲಾಸ್ ಸಾರಿಗೆ ಪುನರಾರಂಭ

ಬೆಂಗಳೂರು, ಸೆಪ್ಟೆಂಬರ್ 29, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಶಿರಡಿ ಮಾರ್ಗದಲ್ಲಿ ಅಂಬಾರಿ ಡ್ರೀಮ್ ಕ್ಲಾಸ್ (ಮಲ್ಟಿಆಕ್ಸಲ್ ಸ್ಲೀಪರ್) ಸಾರಿಗೆಯನ್ನು        ಅಕ್ಟೋಬರ್ 6 ರಿಂದ ಪುನರಾರಂಭಿಸಲಾಗುವುದು. ಪ್ರಯಾಣದರ ವಯಸ್ಕರಿಗೆ ರೂ.1600/- ನಿಗಧಿಪಡಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವಸತಿ ಸಚಿವರ ಪ್ರವಾಸ
ಬೆಂಗಳೂರು, ಸೆಪ್ಟೆಂಬರ್ 29 (ಕರ್ನಾಟಕ ವಾರ್ತೆ): ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ ಅವರು ಅಕ್ಟೋಬರ್ 5 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅಂದೇ ಕೇಂದ್ರಸ್ಥಾನಕ್ಕೆ ವಾಪಸ್ಸಾಗಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *