ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ

ಹೊಸಪೇಟೆ(ವಿಜಯನಗರ),ಅ.05: ಜಿಲ್ಲೆಯ ಹೊಸಪೇಟೆ, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲೂಕುಗಳಲ್ಲಿ ಅಖಿಲ ಭಾರತ ವೃತ್ತಿ (ಸೆಮಿಸ್ಟರ್ ಪದ್ದತಿ) ಪರೀಕ್ಷೆಗಳು (ಆಗಸ್ಟ್-2017  ಮತ್ತು ಹಿಂದಿನ ಸಾಲಿನಲ್ಲಿ ಪ್ರವೇಶ ಪಡೆದ ಸೆಮಿಸ್ಟರ್ ಪದ್ದತಿಯ ಅನುತ್ತೀರ್ಣ ತರಬೇತಿದಾರರಿಗೆ)  ಅ.5 ರಿಂದ 8 ರವರೆಗೆ ನಡೆಯಲಿದ್ದು, ಸದರಿ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಅವರು ಆದೇಶಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀಟರ್ ಒಳಗಿನ ಆವಣರವನ್ನು ಸಿಆರ್‌ಪಿಸಿ ಕಲಂ 144 ರ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ. ಸದರಿ ದಿನಗಳಂದು ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಆಯಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಸೆಂಟರ್ ಗಳನ್ನು ಮುಚ್ಚುವಂತೆ ಅವರು ಆದೇಶಿಸಿದ್ದಾರೆ.

ಈ ಆದೇಶವು ಪರೀಕ್ಷಾ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *