ಮತದಾನ ದಿನ ಮತ ಚಲಾಯಿಸಲು ಕಾರ್ಮಿಕರಿಗೆ ವೇತನ ಸಹಿತ ರಜೆ

 ಕರ್ನಾಟಕ ವಿಧಾನಸಭೆ ಉಪಚುನಾವಣೆ ಮತದಾನ ದಿನ ಮತ ಚಲಾಯಿಸಲು ಕಾರ್ಮಿಕರಿಗೆ ವೇತನ ಸಹಿತ ರಜೆ

ರಾಜ್ಯ ಚುನಾವಣಾ ಆಯೋಗವು ರಾಜ್ಯದಲ್ಲಿನ 33-ಸಿಂಧಗಿ ಹಾಗೂ 82- ಹಾನಗಲ್ ಮತ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿ ಚುನಾವಣೆ ನಡೆಯುವ ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ಶನಿವಾರದಂದು ಮತದಾನ ನಡೆಸಲು ಘೋಷಿಸಿರುವುದರಿಂದ ಮತ ಕ್ಷೇತ್ರಗಳ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆಯನ್ನಾಗಿ ಘೋಷಿಸಲು ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖ-2 ರ ಪತ್ರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಕೋರಿರುತ್ತಾರೆ.
ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸಂಬಂಧಪಟ್ಟ ಕಾರ್ಯ ವ್ಯಾಪ್ತಿಯಲ್ಲಿ  ಬರುವ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳನ್ನು ಒಳಪಟ್ಟಂತೆ ರಾಷ್ಟ್ರೀಯ ಹಬ್ಬ ಮತ್ತು ರಜಾ ದಿನಗಳ ಕಾಯ್ದೆ, 1963 ರ ಕಲಂ 3(ಎ) ರನ್ವಯ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅರ್ಹರಿರುವ ಎಲ್ಲಾ ಕಾರ್ಮಿಕ ಮತದಾರರಿಗೆ ದಿನಾಂಕ: 30-10-2021 ಶನಿವಾರದಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಟ್ಟು ಕಾಯ್ದೆ ಹಾಗೂ ಚುನಾವಣಾ ಆಯೋಗದ ಆದೇಶವನ್ನು ನಿಯಮಾನುಸಾರ ಪಾಲಿಸಬೇಕಾಗಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *