ಕನ್ನಡದಲ್ಲಿ ವಿಜ್ಞಾನ ಉಪನ್ಯಾಸ ಸ್ಪರ್ಧೆಯ ಅರ್ಜಿ ಅಹ್ವಾನ

ವಿಜ್ಞಾನವನ್ನು ಮಾತೃಭಾಷೆಯ ಮೂಲಕ ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ, ಶೈಕ್ಷಣಿಕ ವಲಯದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಹಾಗೂ ಕನ್ನಡದಲ್ಲಿ ಆಕರ್ಷಕವಾಗಿ ಜನಪ್ರಿಯ ಶೈಲಿಯಲ್ಲಿ ವಿಜ್ಞಾನ ಸಂವಹನ ಸಾಧ್ಯ ಎಂಬುದನ್ನು ಸಾಬೀತುಗೊಳಿಸಲು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿಜ್ಞಾನ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಾಗೂ ಬಿ.ಎಡ್. ಪ್ರಶಿಕ್ಷಣಾರ್ಥಿಗಳಿಗಾಗಿ ಅಂತರ ವಿಶ್ವವಿದ್ಯಾಲಯ ಮಟ್ಟದ ಮತ್ತು ರಾಜ್ಯಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದೆ. ರಾಜ್ಯದ ಯಾವುದೇ ವಿಶ್ವವಿದ್ಯಾಲಯದ ಅಡಿಯಲ್ಲಿ ಮೂಲ ವಿಜ್ಞಾನವನ್ನು (ಭೌತಶಾಸ್ತ್ರ, ಜೀವಶಾಸ್ತ್ರ, ರಸಾಯನಶಾಸ್ತ್ರ, ಗಣಿತ ವಿಷಯಗಳನ್ನು) ವ್ಯಾಸಾಂಗ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳು ಹಾಗೂ ಪಿ.ಸಿ.ಎಂ ಅಥವಾ ಸಿಬಿಜಡ್ ಬೋಧನಾ ವಿಧಾನ ಆಯ್ದುಕೊಂಡಿರುವ ಬಿ.ಎಡ್ ಪ್ರಶಿಕ್ಷಣಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.

ವಿಶ್ವವಿದ್ಯಾಲಯದ ಮಟ್ಟದ ಸ್ಪರ್ಧೆಯಲ್ಲಿ ಭೌತ ವಿಜ್ಞಾನ, ಜೀವವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಗಣಿತ ವಿಭಾಗಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಲಾ ಇಬ್ಬರು ವಿದ್ಯಾರ್ಥಿಗಳಂತೆ ಒಟ್ಟು 8 ವಿದ್ಯಾರ್ಥಿಗಳನ್ನು ಒಂದು ವಿಶ್ವವಿದ್ಯಾಲಯದಿಂದ ಆಯ್ಕೆ ಮಾಡಲಾಗುತ್ತದೆ. ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ನವೆಂಬರ್ 5, 2021ರ ಒಳಗೆ ನೊಂದಣಿ ಮಾಡಿಕೊಳ್ಳುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಕ್ರಮದ ರಾಜ್ಯ ಸಂಯೋಜಕರಾದ ಎಚ್.ಎಸ್.ಟಿ. ಸ್ವಾಮಿ ಮೊಬೈಲ್ ಸಂ. 94485 65534, ಯೋಜನಾ ಸಹಾಯಕರಾದ ಶ್ರೀಮತಿ ದೇವಿಕಾ ಕೀರ್ತಿ ಮೊಬೈಲ್ ಸಂ. 94495 30245, ರಾಜಶೇಖರಗೌಡ ಪಾಟೀಲ ಮೊಬೈಲ್ ಸಂ. 90084 42557 ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೇಂದ್ರ ಕಚೇರಿ ಮೊಬೈಲ್ ಸಂ. 94835 49159 ಇವರನ್ನು ಸಂಪರ್ಕಿಸುವುದು. ಹಾಗೂ https://sites .google.com/view/vignanaupanyasa-2021/home  ಈ ಲಿಂಕ್ ಬಳಸಿ ಉಚಿತವಾಗಿ ಆನ್‍ಲೈನ್ ಮೂಲಕ ನೊಂದಣಿ ಮಾಡಿಕೊಳ್ಳಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Leave a Reply

Your email address will not be published. Required fields are marked *