2021ನೇ ಸಾಲಿನ ಪ್ರಥಮ ಇಲಾಖಾ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕ ಸೇವಾ ಆಯೋಗವು 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಸರ್ಕಾರಿ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.


ಅಭ್ಯರ್ಥಿಗಳು  ಅರ್ಜಿ ಶುಲ್ಕವನ್ನು ಪಾವತಿಸಲು ದಿನಾಂಕ 12-11-2021 (ರಾತ್ರಿ 11-45 ಗಂಟೆಯೊಳಗೆ) ಕೊನೆಯ ದಿನಾಂಕವಾಗಿದೆ.  ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಆಯೋಗದ ವೆಬ್‍ಸೈಟ್‍ನಲ್ಲಿ ಪ್ರಕಟಿಸಿರುವ ಅಧಿಸೂಚನೆಯನ್ನು ನೋಡಬಹದಾಗಿದೆ. ಅರ್ಜಿಗಳನ್ನು ಸಲ್ಲಿಸುವ ಹಂತದಲ್ಲಿ ತಾಂತ್ರಿಕ ಸಮಸ್ಯೆಗಳುಂಟಾದಲ್ಲಿ ಸೇವಾ ಸಿಂಧುವಿನ ಸಹಾಯವಾಣಿ 080-22279954, 8088304855 ಮತ್ತು 6361799796ಗಳನ್ನು ಸಂಪರ್ಕಿಸಲು ಕೋರಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *