ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ,ಅ.18, (ಕರ್ನಾಟಕ ವಾರ್ತೆ):  ರಾಷ್ಟ್ರೀಯ ಅಭಿಯಾನ ಯೋಜನೆಯಡಿಯಲ್ಲಿ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಖಾಲಿಯಿರುವ 5 ಜನ ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ಹುದ್ದೆಗಳನ್ನು 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 45 ವರ್ಷಗಳಾಗಿದ್ದು, ಮೆಂಟಲ್ ಹೆಲ್ತ್ ಅಥವಾ ಸೈಕಿಯಾಟ್ರಿಕ್ ಸೋಷಿಯಲ್ ವರ್ಕ್ ಬಗ್ಗೆ 2 ವರ್ಷಗಳ ಕೋರ್ಸ್ ಅನ್ನು ಪ್ರಮಾಣೀಕೃತ ಸಂಸ್ಥೆಯಿಂದ ಪೂರ್ಣಗೊಳಿಸಿದ ಅಥವಾ ಎಂಎಸ್ ಡಬ್ಲ್ಯೂ ವಿಭಾಗದಲ್ಲಿ  ಮೆಡಿಕಲ್ ಮತ್ತು ಸೈಕಿಯಾಟರಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ ಹೊಂದಿರಬೇಕು. ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಗಳಿಸಿದ ಅಂಕಗಳು ಹಾಗೂ ಅನುಭವದ ಆಧಾರದ ಮೇಲೆ ಪ್ರತಿ ಮಾಹೆ ರೂ.25,000/- ದಂತೆ 11 ತಿಂಗಳ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುವುದು.

ನಿಗದಿತ ಅರ್ಜಿ ನಮೂನೆಯನ್ನು ಪಡೆದು ಮತ್ತು ಭರ್ತಿ ಮಾಡಿ ಮುಖ್ಯ ಅಧೀಕ್ಷಕರು, ಕೇಂದ್ರ ಕಾರಾಗೃಹ, ಪರಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಅಂಚೆ, ಬೆಂಗಳೂರು-560100 ಗೆ 15-11-2021 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *