ಕರ್ನಾಟಕ ಉದಯೋನ್ಮುಖ ವಿಜ್ಞಾನ ಲೇಖಕರ ತರಬೇತಿ ಶಿಬಿರ

ಬೆಂಗಳೂರು, ಅಕ್ಟೋಬರ್ 27 (ಕರ್ನಾಟಕ ವಾರ್ತೆ) :  ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು, ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆಯ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಬರವಣಿಗೆಯಲ್ಲಿ ಆಸಕ್ತಿ ಇರುವ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಚಿತ್ರ ನಿರೂಪಕರು, ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಬಹುದು.  ಶಿಬಿರವು ನವೆಂಬರ್ ಮೂರನೇ ವಾರದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ಶ್ರೀ ಆದಿಚುಂಚನಗಿರಿ ಕ್ಷೇತ್ರ, ನಾಮಂಗಲ ತಾಲ್ಲೂಕು, ಮಂಡ್ಯ ಜಿಲ್ಲೆ ಇಲ್ಲಿ ಜರುಗುವುದು.
ನುರಿತ ವಿಜ್ಞಾನ ಬರಹಗಾರರು, ಸಂವಹನಕಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆಯ ಕುರಿತ ವಿವಿಧ ಕೌಶಲ್ಯ, ಆಕರ, ಶಬ್ಮ ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ ಮುಂತಾದ ಅಂಶಗಳಲ್ಲಿ ತರಬೇತಿ ನೀಡಲಾಗುವುದು.
   ಶಿಬಿರಾರ್ಥಿಗಳಾಗಿ ಭಾಗವಹಿಸಲಿಚ್ಚಿಸುವವರು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು.  ವ್ಯಕ್ತಿ ಸ್ವ ವಿವರದೊಂದಿಗೆ ಈಗಾಗಲೆ ಒಂದು ಸ್ವ ರಚಿತ ಕನ್ನಡ ವೈಜ್ಞಾನಿಕ ಲೇಖನದ ಪ್ರತಿಯೊಂದಿಗೆ ಅರ್ಜಿಯನ್ನು ಗೌರವ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ 24/2, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-560 070 ಇ-ಮೇಲ್  krvp.info@mail.com ಈ ವಿಳಾಸಕ್ಕೆ ನವೆಂಬರ್ 15 ರೊಳಗೆ ಸಲ್ಲಿಸಬೇಕು.  
 
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸಂಘಟಿಸಿದ ಲೇಖಕರ ಶಿಬಿರಗಳಲ್ಲಿ ಈಗಾಗಲೇ ಭಾಗವಹಿಸಿದವರು ಅರ್ಜಿ ಸಲ್ಲಿಸುವಂತಿಲ್ಲ.   ಆಯ್ಕೆಯಾದ ಅಭ್ಯರ್ಥಿಗಳಿಗೆ ನೋಂದಣಿ ಉಚಿತವಾಗಿದ್ದು, ಪರಿಷತ್ತು ಊಟೋಪಚಾರ, ವಾಸ್ತವ್ಯ, ಓ.ಓ.ಡಿ ಸೌಲಭ್ಯವನ್ನು ಕಲ್ಪಿಸುವುದು ಹಾಗೂ ನಿಖರವಾದ ದಿನಾಂಕ ಮತ್ತು ಸ್ಥಳವನ್ನು ತಿಳಿಸಲಾಗುವುದು.    ಹೆಚ್ಚಿನ ಮಾಹಿತಿಗಾಗಿ ಪರಿಷತ್ತಿನ ಕಚೇರಿ, ದೂರವಾಣಿ ಸಂಖ್ಯೆ: 080-26718939/9483549159 ಅಥವಾ ಯೋಜನಾ ಸಹಾಯಕರಾದ ಶ್ರೀಮತಿ ದೇವಿಕಾ ಕೀರ್ತಿ ಮೊ.ಸಂ. 9449530245 ನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *