ನಗರ ವಿಶ್ವವಿದ್ಯಾನಿಲಯದಲ್ಲಿ ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ 2021-22ನೇ ಶೈಕ್ಷಣಿಕ ವರ್ಷಕ್ಕೆ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಸ್ನಾತಕೋತ್ತರ ಅಧ್ಯಯನ ವಿಭಾಗಗಳಾದ  M.A (Urban Studies) , M.Sc (Computer Science),  M.Sc (Environmental Science), MVA (Master of Visual Arts)   ವಿಷಯಗಳಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in     ದಲ್ಲಿ ಡೌನಲೋಡ್ ಮಾಡುಕೊಳ್ಳವ ಮೂಲಕ ಸಂಬಂಧಿತ ದಾಖಲೆಯ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು-560 001 ಇವರಿಗೆ ಕಛೇರಿ ಸಮಯದ ಒಳಗೆ ದಿನಾಂಕ: 30.11.2021 ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.

ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Leave a Reply

Your email address will not be published. Required fields are marked *