ಕಾಲೇಜು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ

 ಕಾಲೇಜು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ  ಪರೀಕ್ಷಾ ತರಬೇತಿಗೆ

ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ  ಪ್ರೊ. ಮಂಜಪ್ಪ ಡಿ. ಹೊಸಮನೆ ಚಾಲನೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕರ್ನಾಟಕ ಸರ್ಕಾರ ನಡೆಸಲಿರುವ ಕಾಲೇಜು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ  ಪರೀಕ್ಷಾ ತರಬೇತಿ ಶಿಬಿರವನ್ನು ಆಯೋಜಿಸಿದ್ದು, ನವೆಂಬರ್ 24 ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕಾವೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ    ಪ್ರೊ. ಮಂಜಪ್ಪ ಡಿ. ಹೊಸಮನೆ ಅವರು ತರಬೇತಿ ಶಿಬಿರವನ್ನು  ಉದ್ಘಾಟಿಸಲಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್  ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ತರಬೇತಿ ಕಾರ್ಯಕ್ರಮಕ್ಕೆ ನಾಡಿನ ಹಿರಿಯ ಪತ್ರಕರ್ತರೂ ಕನ್ನಡ ಪ್ರಭ ದಿನಪತ್ರಿಕೆ ಬ್ಯೂರೋ ಮುಖ್ಯಸ್ಥರಾದ ಅಂಶಿಪ್ರಸನ್ನಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ತರಬೇತಿ ಪಡೆಯುವವರಿಗೆ ಮಾರ್ಗದರ್ಶನ ನೀಡುವರು. ಸಮಾರಂಭದಲ್ಲಿ ಕುಲಸಚಿವ ಪ್ರೊ. ಆರ್. ರಾಜಣ್ಣ ಉಪಸ್ಥಿತರಿರುವರು.
ಕರಾಮುವಿ ನಡೆಸುವ ತರಬೇತಿ ಕಾರ್ಯಕ್ರಮಗಳಲ್ಲಿ  ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರವು ಅತ್ಯಂತ ಪ್ರಮುಖವಾಗಿದ್ದು, ಕಡ್ಡಾಯ ಇಂಗ್ಲೀಷ್, ಕಡ್ಡಾಯ ಕನ್ನಡ, ಸಾಮಾನ್ಯ ಜ್ಞಾನದ ಪತ್ರಿಕೆಗಳಿಗೆ  ಹೆಚ್ಚಿನ ಒತ್ತನ್ನು ನೀಡಲಾಗುವುದು. ತರಬೇತಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಇನ್ನೂ ಕಾಲಾವಕಾಶವಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821 – 2515944 ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *