ಕನ್ನಡ ಪುಸ್ತಕಗಳ ಪ್ರದರ್ಶನ

 ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 2019ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಏಕಗವಾಕ್ಷಿ ಯೋಜನೆಯಡಿಯಲ್ಲಿ ಮತ್ತು 2021ರಲ್ಲಿ ಪ್ರಥಮ ಮುದ್ರಣಗೊಂಡ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿಯ ಮುಂದೆ ಆಯ್ಕೆಗಾಗಿ ಮಂಡಿಸಲಾಗಿತ್ತು. ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಮತ್ತು ಆಯ್ಕೆಯಾಗದ ಕನ್ನಡ ಪುಸ್ತಕಗಳ ಪ್ರದರ್ಶನವನ್ನು ದಿನಾಂಕ: 13-12-2021 ರಿಂದ ದಿ: 15-12-2021 ರವರಗೆ “ಗ್ರಂಥಾಂಗಣ”, ನಗರ ಕೇಂದ್ರ ಗ್ರಂಥಾಲಯ, ಪಶ್ಚಿಮ ವಲಯ, ಹಂಪಿನಗರ ಬೆಂಗಳೂರಿನಲ್ಲಿ ಏರ್ಪಡಿಸಲಾಗುವುದು.  

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಪುಸ್ತಕಗಳ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು, ವಿತರಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 17-12-2021ರ ಒಳಗಾಗಿ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ:ಅಂಬೇಡ್ಕರ್ ವೀದಿ, ಬೆಂಗಳೂರು-560 001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಲು ಕೋರಿದೆ. ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಾರ್ವಜನಿಕ ಗ್ರಂಥಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *