ಆನ್‌ಲೈನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಗೆ ಅವಕಾಶ

ಬೆಂಗಳೂರು, ಜನವರಿ 19, (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15 ಹಾಗೂ 2018-19, 2019-20 ಸ್ನಾತಕ ಪದವಿ (UG)  ಮತ್ತು ಎಲ್.ಎಲ್.ಎಂ., ಎಂ.ಬಿ.ಎ (ಲಾ) , ಎಂ.ಐ.ಎಂ., ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳು (Repeaters).  ಹಾಗೂ 2020-21ನೇ ಶೈಕ್ಷಣಿಕ ಸಾಲಿನಲ್ಲಿ (ಜವರಿ ಆವೃತ್ತಿ) ಪ್ರವೇಶಾತಿ ಪಡೆದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ ಬಿ.ಎ./ಬಿ.ಕಾಂ, ಬಿ.ಲಿಬ್.ಐ.ಎಸ್ಸಿ, ಎಂ.ಎ./ಎಂ.ಕಾಂ. ಎಂ.ಬಿ.ಎ, ಎಲ್ಲಾ ಎಂ.ಎಸ್ಸಿ. ಮತ್ತು ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ಡಿಪ್ಲೋಮಾ, ಸರ್ಟಿಫಿಕೇಟ್ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಮತ್ತು ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕ ಪಾವತಿಗೆ ದಂಡಶುಲ್ಕವಿಲ್ಲದೆ ಕಡೆಯ ದಿನಾಂಕ 24.01.2021 ಆಗಿದ್ದು , 200/-ರೂ , ದಂಡದೊಂದಿಗೆ ಪಾವತಿಸಲು ದಿನಾಂಕ : 07.02.2021 ಆಕೊನೆಯ ದಿನವಾಗಿರುತ್ತದೆ.


ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಪಾವತಿಸುವುದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ 
www.ksoumysuru.ac.in ಅನ್ನು ಅಥವಾ  ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ, ನಂ -61, 5 ನೇ ಮುಖ್ಯರಸ್ತೆ, 5 ನೇ ಅಡ್ಡರಸ್ತೆ, ಚಾಮರಾಜಪೇಟೆ, ಬೆಂಗಳೂರು -18, ಕಛೇರಿ ದೂರವಾಣಿ ಸಂಖ್ಯೆ  080-26603664 ಅಥವಾ  ಸಹಾಯವಾಣಿ ಸಂಖ್ಯೆ : 8800335638 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಗಿರೀಶ್ ಹೆಚ್.ಎನ್.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *