ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ನೀಡುವ ಕಾರ್ಯಕ್ರಮ

ಕನ್ನಡ ಪುಸ್ತಕ ಪ್ರಾಧಿಕಾರದ ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ನೀಡುವ ಕಾರ್ಯಕ್ರಮ ಇಂದು ಮೈಸೂರಿನಲ್ಲಿ ಇರುವ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಸಹಕಾರ ಸಚಿವರಾದ ಶ್ರೀ ಎಸ್. ಟಿ.ಸೋಮಶೇಖರ್ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಶಾಲಾ-ಕಾಲೇಜುಗಳಿಗೆ ಪುಸ್ತಕ ವಿತರಣೆ ಮಾಡಿದರು.

ಮೈಸೂರಿನ  ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್ ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು.

ಮೈಸೂರು ನಗರದ ಪೂಜ್ಯ ಮಹಾಪೌರರಾದ ಶ್ರೀಮತಿ ಸುನಂದಾ ಪಾಲನೇತ್ರ, ಗುಂಡ್ಲುಪೇಟೆ ಶಾಸಕರಾದ ಶ್ರೀ ನಿರಂಜನ್ ಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಚ್. ವಿ. ರಾಜೀವ್ ಹಾಗೂ ಕನ್ನಡಪ್ರಭ ಪತ್ರಿಕೆಯ ಮೈಸೂರಿನ ಸ್ಥಾನಿಕ ಸಂಪಾದಕರಾದ ಶ್ರೀ ಅಂಶಿ ಪ್ರಸನ್ನಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಎಂ.ಎನ್.ನಂದೀಶ್ ಹಂಚೇ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್  ಉಪಸ್ಥಿತರಿದ್ದರು

Leave a Reply

Your email address will not be published. Required fields are marked *