ಉಕ್ರೇನ್ನಿಂದ ಹಿಂದಿರುಗಿದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅನುಮತಿ
ಉಕ್ರೇನ್ನಿಂದ ಹಿಂದಿರುಗಿದ ನಮ್ಮ ಜನರು, ವಿಶೇಷವಾಗಿ ವಿದ್ಯಾರ್ಥಿ ಸಮುದಾಯದ ಪರಿಸ್ಥಿತಿಯನ್ನು ಪರಿಗಣಿಸಿ, ಕರ್ನಾಟಕದ ಹತ್ತಿರದ ವಿಮಾನ ನಿಲ್ದಾಣದಿಂದ ರಾಜ್ಯದೊಳಗಿನ ಅವರ ಸ್ಥಳಗಳಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣವನ್ನು ನೀಡಲು ನಿರ್ಧರಿಸಲಾಗಿದೆ.
ಕರ್ನಾಟಕ ರಾಜ್ಯ ವಿಮಾನ ನಿಲ್ದಾಣದೊಳಗಿನ ಎಲ್ಲಾ ನೋಡಲ್ ಅಧಿಕಾರಿಗಳು ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣವನ್ನು ಅನುವು ಮಾಡಿಕೊಡಬೇಕು ಎಂದು ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಸಿ.ಕಳಸದ (ಭಾ.ಆ.ಸೇ) ಅವರು ತಿಳಿಸಿದ್ದಾರೆ.