ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2022

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ದಿನಾಂಕ: 10-03-2022 ರಿಂದ 15-03-2022 ರವರೆಗೆ ‘ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2022’ ನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗುವುದು.

  ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ಒಂದು ದಿನಕ್ಕೆ ರೂ. 500/- ರಂತೆ ಆರು ದಿನಗಳಿಗೆ ರೂ. 3000/- ಗಳ ಬಾಡಿಗೆ ಹಾಗೂ ಒಂದು ಮಳಿಗೆಗೆ ರೂ. 1000/- ಗಳ ಠೇವಣಿ ಮೊತ್ತದ ಪ್ರತ್ಯೇಕ ಡಿ.ಡಿ ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಡಿ.ಡಿ.ಯನ್ನು ಸಲ್ಲಿಸುವುದು.
ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು / ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ www.kannadapustakapradhikara.com ನಲ್ಲಿ ಪಡೆದುಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಡಿ.ಡಿ.ಯೊಂದಿಗೆ ದಿನಾಂಕ: 08-03-2022 ರಂದು ಸಂಜೆ 5 ಗಂಟೆಯೊಳಗೆ ಆಡಳಿತಾಧಿಖಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು  ಇವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadapradhikara@gmail.com  ಮೂಲಕ ಸಲ್ಲಿಸಬೇಕು. ನಿರ್ಮಿಸಲಾಗುವ 50 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22484516 / 22107704 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *