ಮಹಾಲಕ್ಷ್ಮಿ ಲೇಔಟ್ ನಲ್ಲಿ ಗುರುವಂದನಾ ಕಾರ್ಯಕ್ರಮ.300 ಶಿಕ್ಷಕರಿಗೆ ಸನ್ಮಾನ.

ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ನಾಗಪುರ ವಾರ್ಡ್ ನ. ಶಾಸಕರ ಭವನದ ಆವರಣದಲ್ಲಿ ಮ ಹಾಲಕ್ಷ್ಮಿ ಎಜುಕೇಷನಲ್‌ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರು ಮುಖ್ಯ ಶಿಕ್ಷಕರು ಶಿಕ್ಷಣಾಧಿಕಾರಿಗಳ ಸಂಘದ ವತಿಯಿಂದ ತಾಲೂಕ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ  ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಈ ಕಾರ್ಯಕ್ರಮವನ್ನು  ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿವಿ ಸದಾನಂದ ಗೌಡರ ಹಾಗೂ ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥನಾರಾಯಣ ಉದ್ಘಾಟಿಸಿದರು.

 ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರಾದ ಕೆ ಗೋಪಾಲಯ್ಯ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಾಜಿ ಉಪ ಮಹಾಪೌರ ಹೇಮಲತಾ ಗೋಪಾಲಯ್ಯ, ಎಸ್ ಹರೀಶ್,  ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಎನ್ ಜಯರಾಮಣ್ಣ, ಶಿಕ್ಷಣಾಧಿಕಾರಿ ರಮೇಶ್ ಸೇರಿದಂತೆ ಹಲವು ಗಣ್ಯರು ಹಾಗೂ ಶಿಕ್ಷಕರು ಸಿಬ್ಬಂದಿ ವರ್ಗ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ   300 ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *