ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 25, (ಕರ್ನಾಟಕ ವಾರ್ತೆ) : ಕೈ ಮಗ್ಗ ನೇಕಾರರಿಗೆ ಪ್ರತಿ ವರ್ಷ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಆಗಸ್ಟ್ 7 ರಂದು ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈ ಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ / ಶ್ರೇಷ್ಠತೆ / ತಾಂತ್ರಕತೆ / ಉತ್ಕøಷ್ಟತೆ  ಹೊಂದಿರುವ ಉತ್ಪನ್ನದ ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ನೀಡಲು ಉದ್ದೇಶಿಸಲಾಗಿದ್ದು, ಪ್ರಶಸ್ತಿಯು ನಗದು ಬಹುಮಾನ, ಒಂದು ನೆನಪಿನ ಕಾಣಿಕೆ, ಶಾಲು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಆಸಕ್ತ ಕೈಮಗ್ಗ ನೇಕಾರರು ಏಪ್ರಿಲ್ 30 ರೊಳಗೆ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಸರ್ಕಾರಿ ಎಸ್.ಜೆ.ಪಿ ಪಾಲಿಟೆಕ್ನಿಕ್ ಆವರಣ, ಕೆ.ಆರ್.ಸರ್ಕಲ್, ಬೆಂಗಳೂರು – 560001 ಇಲ್ಲಿ ಪಡೆಯಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080- 22341176 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *