ಏ.30ರಂದು ಜವಾಹರ್ ನವೋದಯ ವಿದ್ಯಾಲಯದ 6ನೇತರಗತಿ ಪ್ರವೇಶ ಪರೀಕ್ಷೆ

ಬಳ್ಳಾರಿ,ಏ.29: ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯು ಏ.30ರಂದು ಜಿಲ್ಲೆಯ 04 ತಾಲೂಕಿನ 17 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದ್ದು, ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ಸಿ.ಆರ್.ಪಿ.ಸಿ. ಕಲಂ 144ರ ಮೇರೆಗೆ ನಿಭರ್ಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಹಾಗೂ ಬೆಳಗ್ಗೆ 9ರಿಂದ 2.30ವರೆಗೆ ಆಯಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್‍ಗಳನ್ನು ಮುಚ್ಚಲು ಆದೇಶಿಸಲಾಗಿದೆ.ಈ ಆದೇಶವು ಸದರಿ ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಹಿಸುವುದಿಲ್ಲ ಎಂದು ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *