ಕೃಷಿ ಪ್ರಶಸ್ತಿಗಳ ಸ್ಪರ್ಧೆ

ಬೆಂಗಳೂರು ಮೇ 30  (ಕರ್ನಾಟಕ ವಾರ್ತೆ) : 2022-23ನೇ  ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿ (ಬೆಳೆ ಸ್ಪರ್ಧೆ) ಗಾಗಿ  ಭಾಗವಹಿಸಲಿಚ್ಚಿಸುವ ರೈತರ / ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಲ್ಲಾ ಮಟ್ಟಗಳಿಗೂ (ರಾಜ್ಯ/ಜಿಲ್ಲಾ/ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಗೆ) ಅನ್ವಯಿಸುವಂತೆ ನಿಗದಿತ ನಮೂನೆಯಲ್ಲಿ ಒಂದೇ ಅರ್ಜಿಯನ್ನು ಸಲ್ಲಿಸಬೇಕು.

ಪ್ರಸಕ್ತ 2022-23ನೇ ಸಾಲಿನಿಂದ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ ರಾಜ್ಯ / ಜಿಲ್ಲಾ / ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಪ್ರಯುಕ್ತ ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಪ್ರಶಸ್ತಿಗೆ ಅರ್ಜಿಗಳನ್ನು ಸಲ್ಲಿಸುವ ಮುಖಾಂತರ ಕಾರ್ಯಕ್ರಮದ ಪ್ರಯೋಜನ ಪಡೆಯಲು ಕೋರಿದೆ.

2022-23ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ರೈತ/ರೈತಮಹಿಳೆಯರು ಅರ್ಜಿ ಸಲ್ಲಿಸಲು 31ನೇ ಆಗಸ್ಟ್ 2022 ಕೊನೆಯ ದಿನಾಂಕವಾಗಿರುತ್ತದೆ. ಸ್ಪರ್ಧಿಸಬಹುದಾದ ಬೆಳೆಗಳ ವಿವರಗಳು, ಅರ್ಜಿ ನಮೂನೆ, ಪ್ರವೇಶ ಶುಲ್ಕ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಹಾಗೂ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *