ಅರ್ಹ ಬಾಲಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 21(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಬಾಲಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಅಕ್ಟೋಬರ್ 01, 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. (ಅಭ್ಯರ್ಥಿಯು 01, ಅಕ್ಟೋಬರ್ 2000 ರಿಂದ 01, ಏಪ್ರಿಲ್ 2005 (17.1/2-22)ರ ದಿನಾಂಕಗಳ ನಡುವೆ ಜನಿಸಿರಬೇಕು)

ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು, ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ 2022ರ ಜುಲೈ 30 ರೊಳಗೆ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಪಡೆಯಬಹುದಾಗಿದೆ ಮತ್ತು ಸಹಾಯವಾಣಿ ಸಂಖ್ಯೆಗಳು ದಕ್ಷಿಣ ಕನ್ನಡ ಜಿಲ್ಲೆ ದೂ.ಸಂ.: 0824-2225078, ಉಡುಪಿ ಜಿಲ್ಲೆ ದೂ.ಸಂ.:  0820-2574881, ಉತ್ತರ ಕನ್ನಡ ಜಿಲ್ಲೆ ದೂ.ಸಂ.: 08382-226589 ಹಾಗೂ ಕೇಂದ್ರ ಕಚೇರಿ: ಮೊ.ಸಂ.: 0850770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *