ನೂತನ ರಾಷ್ಟ್ರಪತಿಗಳಿಗೆ ರಾಜ್ಯಪಾಲರಿಂದ ಅಭಿನಂದನೆ

ಬೆಂಗಳೂರು 25.07.2022: ಭಾರತದ 15ನೇ ರಾಷ್ಟ್ರಪತಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ ಗೌರವಾನ್ವಿತ  ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ಕರ್ನಾಟಕದ ರಾಜ್ಯಪಾಲರು “ದೇಶದ ನೂತನ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಗೌರವಾನ್ವಿತ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಸುದೀರ್ಘ ಅನುಭವ, ಸಕಾರಾತ್ಮಕ ಚಿಂತನೆಯಿಂದ ದೇಶದ ಅತ್ಯುನ್ನತ ಹುದ್ದೆಯ ಜವಾಬ್ದಾರಿ ನಿರ್ವಹಿಸುವಲ್ಲಿ ಯಶಸ್ವಿಯಾಗುತ್ತಾರೆ. ಅವರ ಮಾರ್ಗದರ್ಶನ, ನಾಯಕತ್ವದಲ್ಲಿ ದೇಶವು ವಿಶ್ವದಲ್ಲಿ ಹೊಸ ಎತ್ತರ ಸಾಧಿಸಲಿದೆ.” ಎಂದು ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *