ಕರಾಮುವಿಯಿಂದ ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷಾ ತರಬೇತಿ ಶಿಬಿರ ಸಮಾರೋಪ ಹಿರಿಯ ಪ್ರಾಧ್ಯಾಪಕಿ ಪ್ರೊ. ಆರ್. ಇಂದಿರಾ ಭಾಗಿ

ಬೆಂಗಳೂರು, ಆಗಸ್ಟ್ 06 ( ಕರ್ನಾಟಕ ವಾರ್ತೆ ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ವು ಯುಜಿಸಿ-ನೆಟ್/ಕೆ-ಸೆಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಸಿದ 45 ದಿನದ ತರಬೇತಿ ಶಿಬಿರವನ್ನು ಹಮ್ಮಿಕೊಂಡಿತ್ತು. ಈ ಶಿಬಿರದ ಸಮಾರೋಪ ಸಮಾರಂಭವನ್ನು ಆಗಸ್ಟ್ 08 ರ ಸೋಮವಾರ ಬೆಳಗ್ಗೆ 11 ಗಂಟೆಗೆ ಕರಾಮುವಿ ಆವರಣದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಮಾರಂಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕಿ, ಚಿಂತಕಿ ಪ್ರೊ. ಆರ್. ಇಂದಿರಾ ಅವರು ಭಾಗವಹಿಸಿ ತರಬೇತಿ ಶಿಬಿರಾರ್ಥಿಗಳಿಗೆ ಶುಭಹಾರೈಸುವರು.

 
ಇದೇ ಸಮಯದಲ್ಲಿ ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು ಅವರು ಅಧ್ಯಯನ ಪುಸ್ತಕ ಬಿಡುಗಡೆ ಮಾಡಿ  ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕುರಿತು ಮುಖ್ಯ ಭಾಷಣ ಮಾಡುವರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆ ವಹಿಸುವರು. ಪ್ರಭಾರ ಕುಲಸಚಿವ ಡಾ. ಎ. ಖಾದರ್ ಪಾಷ ಉಪಸ್ಥಿತರಿರುವರು. ಕಳೆದ  ಜೂನ್ 29 ರಂದು ಈ ತರಬೇತಿ ಪ್ರಾರಂಭವಾಗಿದ್ದು ಆಗಸ್ಟ್ 08 ರಂದು ಮುಗಿಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 164 ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *