ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ – ಸಹಾಯವಾಣಿ (Helpline) ಕೌನ್ಸಿಲಿಂಗ್ (counseling) ಕಾರ್ಯಕ್ರಮ

ಬೆಂಗಳೂರು, ಮಾರ್ಚ್16 (ಕರ್ನಾಟಕ ವಾರ್ತೆ): ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೋಷಕರ ಅಭಿಲಾಷೆಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮಥ್ರ್ಯ, ಬುದ್ದಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೋಷಕರು/ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಪೂರ್ತಿ ನೀಡಬೇಕಾದ ಅವಶ್ಯಕತೆ ಇದೆ.


ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೈರ್ಯ (confidence) ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ (Helpline) ಕೌನ್ಸಿಲಿಂಗ್ (counseling) ಕಾರ್ಯಕ್ರಮವನ್ನು ದಿನಾಂಕ:20.03.2023 ಸೋಮವಾರ ಅಪರಾಹ್ನ 03.00 ಗಂಟೆಗೆ ಪ್ರಾರಂಭಿಸಲಾಗುವುದು. ಇದಕ್ಕಾಗಿ ಎರಡು ದೂರವಾಣಿ ಸಂಖ್ಯೆ 080- 23310075, 080 23310076 ಗಳನ್ನು ಮೀಸಲಿಡಲಾಗಿದೆ.


ಈ “ಸಹಾಯವಾಣಿ”ಯು ದಿನಾಂಕ:20.03.2023 ರಿಂದ 28.03.2023 ಪ್ರತಿ ದಿನ ಅಪರಾಹ್ನ 03.00 ರಿಂದ ಸಂಜೆ 7.30 ಗಂಟೆಯವರೆಗೆ (ದಿನಾಂಕ:22.03.2023ನ್ನು ಹೊರತುಪಡಿಸಿ) ಹಾಗೂ ದಿನಾಂಕ:26.03.2023ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 6.00ರವರೆಗೆ ಕಾರ್ಯನಿರ್ವಹಿಸಲಾಗುತ್ತಿದೆ. ದಿನಾಂಕ:31.03.2023 ರಿಂದ 15.04.2023 ರವರೆಗೆ ನಿಯಂತ್ರಣ ಕೊಠಡಿಯಾಗಿ ಬೆಳಿಗ್ಗೆ 10.00 ರಿಂದ ಮದ್ಯಾಹ್ನ 2.00 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸಲಾಗುತ್ತದೆ.


ಪೋಷಕರು, ವಿದ್ಯಾರ್ಥಿಗಳು ಮೇಲೆ ತಿಳಿಸಿರುವ ದೂರವಾಣಿ ಸಂಖ್ಯೆಗೆ ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಪೋಷಕರು ಸದರಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

21ನೇ ಅಖಿಲ ಭಾರತಅಂತರ – ಕೃಷಿ ವಿಶ್ವವಿದ್ಯಾಲಯಗಳ ಯುವಜನೋತ್ಸವ – (ಅಗ್ರಿ ಯುನಿಫೆಸ್ಟ್  2022-23)

Leave a Reply

Your email address will not be published. Required fields are marked *