ಬೆಂಗಳೂರು, ಏಪ್ರಿಲ್ 01 (ಕರ್ನಾಟಕ ವಾರ್ತೆ): ಶ್ರೀ ಜಯಚಾಮರಾಜೇಂದ್ರ ಸರ್ಕಾರಿ ಆಯುರ್ವೇದ ಮತ್ತು ಯುನಾನಿ ಆಸ್ಪತ್ರೆ ಹಾಗೂ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಯೋಗ ವಿಭಾಗ, ಧನ್ವಂತರಿ ರಸ್ತೆ, ಆನಂದರಾವ್ ವೃತ್ತ, ಬೆಂಗಳೂರು ಇಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉಚಿತ ಯೋಗಾಸನ, ಪ್ರಾಣಾಯಾಮ, ಧ್ಯಾನ ತರಗತಿ, ವಿಶೇಷ ಉಪನ್ಯಾಸಗಳನ್ನು ಏಪ್ರಿಲ್ 1 ರಿಂದ ಏಪ್ರಿಲ್ 30ರ ವರೆಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆವರೆಗೆ ಆಸ್ಪತ್ರೆಯ ಯೋಗ ವಿಭಾಗದಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿ ಹಾಗೂ ನೊಂದಣಿಗೆ ಮೊ.ಸಂ: 9845986119ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.