ಮಣಿಪಾಲದಲ್ಲಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿರುವ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 8-7-2023 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಉಡುಪಿಯ ಮಣಿಪಾಲದಲ್ಲಿ ನಡೆಯಲಿದೆ. ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದಿರುವ ಪತ್ರಕರ್ತರ ಮಕ್ಕಳನ್ನು ಪುರಸ್ಕರಿಸಲಾಗುವುದು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಕ್ಕಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಿದ್ದಾರೆ.


ವಿಶೇಷ ಆಹ್ವಾನಿತರಾಗಿ ಮೀನುಗಾರಿಕಾ ಸಚಿವ ಮಂಕಾಳ ಎದ್ ವೈದ್ಯ, ಮಣಿಪಾಲ ಆಸ್ಪತ್ರೆಗಳ ನಿರ್ದೇಶಕ ಡಾ.ಸುದರ್ಶನ ಬಲ್ಲಾಳ ಅವರು ಭಾಗವಹಿಸುವರು. ಮುಖ್ಯ ಅತಿಥಿಯಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಮಣಿಪಾಲ ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಭಾಗವಹಿಸಲಿದ್ದು, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಪತ್ರಕರ್ತ ಬಾಂಧವರು ಭಾಗವಹಿಸುವಂತೆ ಉಡುಪಿ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜಿನಬೈಲು ಅವರು ತಿಳಿಸಿದ್ದಾರೆ.