ವಾರ್ತಾಜಾಲ ಮೀಡಿಯಾ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಅದ್ದೂರಿ ಪತ್ರಿಕಾ ದಿನಾಚರಣೆ

ಕನ್ನಡದ ಮೊಟ್ಟ ಮೊದಲ ಪತ್ರಿಕೆಯಾಗಿ ಹೊರಹೊಮ್ಮಿದ ಮಂಗಳೂರು ಸಮಾಚಾರದ ಮೊದಲ ಸಂಚಿಕೆ ಬಿಡುಗಡೆಗೊಂಡ ದಿನದ ಸ್ಮರಣಾರ್ಥ ಜುಲೈ 1ರಂದು ಕರ್ನಾಟಕದಲ್ಲಿ ಪತ್ರಿಕಾ ದಿನ ಆಚರಿಸಲಾಗುತ್ತದೆ.

1843ರ ಜುಲೈ 1ರಂದು ಕನ್ನಡದ ಮೊಟ್ಟಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾಯಿತು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಸಂವಿಧಾನದ ನಾಲ್ಕನೇ ರಂಗವಾಗಿ ಮಾಧ್ಯಮಗಳು ಕೆಲಸ ಮಾಡುತ್ತವೆ. 

‘ಮಂಗಳೂರು ಸಮಾಚಾರ’ವೆಂಬ ಹೆಸರಿನಲ್ಲಿ ಪ್ರಾರಂಭಗೊಂಡ ಕನ್ನಡ ವಾರ ಪತ್ರಿಕೆಯಿಂದ ಕನ್ನಡ ಪತ್ರಿಕೋದ್ಯಮ ಚರಿತ್ರೆ ಕರ್ನಾಟಕದಲ್ಲಿ ಆರಂಭವಾಗುತ್ತದೆ.ಇಂದು ಪತ್ರಿಕಾರಂಗ ಬೃಹದಾಕಾರವಾಗಿ ನಡೆದು ಬಂದಿದ್ದರೂ ಡಿಜಿಟಲ್ ಮಾಧ್ಯಮಗಳ ಪ್ರಭಾವದ ಮಧ್ಯೆ ಅನೇಕ ಸವಾಲುಗಳು ಮತ್ತು ಸಮಸ್ಯೆಗಳನ್ನು ಎದುರಿಸುತ್ತಿದೆ. ಪತ್ರಿಕಾ ದಿನಾಚರಣೆಯ ದಿನದಲ್ಲಾದರೂ ಇವುಗಳ ಮೇಲೆ ಬೆಳಕು ಚೆಲ್ಲುವ ಕೆಲಸವಾಗಬೇಕು. 

ಸರ್ಕಾರದ, ರಾಜಕೀಯ ನಾಯಕರು, ಪ್ರಭಾವಿಗಳ ಹಸ್ತಕ್ಷೇಪವಿಲ್ಲದೆ ಸ್ವತಂತ್ರವಾಗಿ ಮಾಧ್ಯಮಗಳು, ಪತ್ರಿಕೆ ಕಾರ್ಯನಿರ್ವಹಿಸುವಂತಾಗಬೇಕು ಎಂಬುದು ಎಲ್ಲರ ಆಶಯವಾಗಿರುತ್ತದೆ. ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ, ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡವರಿಗೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ವಾರ್ತಾಜಾಲ ಮೀಡಿಯಾ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಎಂಬ ಮಾಧ್ಯಮ ಸಂಸ್ಥೆಯಿಂದ ಪತ್ರಿಕಾ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಮಲ್ಲೇಶ್ವರಂ ನ, ಸಂಪಿಗೆ ರಸ್ತೆಯ 14ನೇ ಕ್ರಾಸ್ ನಲ್ಲಿರುವ ಸೇವಾ ಸದನದಲ್ಲಿ ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಪಾತಾಜಾಲ ಮೀಡಿಯಾ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಎಂಬ ಮಾಧ್ಯಮ ಸಂಸ್ಥೆಯು ಬೆಂಗಳೂರಿನಲ್ಲಿ ಕಚೇರಿಯನ್ನು ಹೊಂದಿದ್ದು ರಾಜ್ಯಾದ್ಯಂತ ತನ್ನದೇ ಆದ ಓದುಗರ ಬಳಗವನ ಹೊಂದಿದ್ದು ಸುಮಾರು 14 ವರ್ಷಗಳಿಂದ ಮುದ್ರಣ ಮಾಧ್ಯಮದಲ್ಲಿ ತನ್ನದೇ ಆದ ಚಾಪನ್ನ ಮೂಡಿಸಿಕೊಂಡು ಬಂದಿದ್ದು, ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮ ಲೋಕಕ್ಕೆ ಪಾದರ್ಪಣೆ ಮಾಡಿದ್ದು ಅದರಲ್ಲೂ ಕೂಡ ತನ್ನದೇ ಆದ ಚಾಪನ್ನು ಮೂಡಿಸಿಕೊಂಡು ಮುನ್ನುಗುತ್ತಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರಂನ ಸಂಪಿಗೆ ರೋಡ್ ನ 14ನೇ ಕ್ರಾಸ್ ನಲ್ಲಿರುವ ಸೇವಾ ಸದನದಲ್ಲಿ ಪತ್ರಿಕಾ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ, ಅಚ್ಚುಕಟ್ಟಾಗಿ, ನಯಬದ್ಧವಾಗಿ ಆಚರಿಸಲಾಯಿತು. ಪಾತಾಜಾಲ ಮೀಡಿಯಾ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ನ ಮಾಲೀಕರು ಹಾಗೂ ಸಂಪಾದಕರಾದ ಬಿಕೆ ಪ್ರಸನ್ನ ಮತ್ತು ಅವರ ಪತ್ರಿಕಾ ಮಿತ್ರರ ಬಳಗದಿಂದ ಈ ಕಾರ್ಯಕ್ರಮವನ್ನು ಬಹಳ ಯಶಸ್ವಿಯಾಗಿ ಆಚರಿಸಲಾಯಿತು.

Leave a Reply

Your email address will not be published. Required fields are marked *