ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಬೆಂಗಳೂರು: ಪ್ರತಿಯೊಬ್ಬ ನಾಗರಿಕರೂ ನಮ್ಮ ಹಕ್ಕಿನ ಜೊತೆಗೆ ಕರ್ತವ್ಯದ ಪರಿಕಲ್ಪನೆಯೊಂದಿಗೆ ದೇಶ ಕಟ್ಟಲು ಭವಿಷ್ಯದ ದಿನಗಳಲ್ಲಿ ನಮ್ಮದೇ ಆದ ಕಾಣಿಕೆ ಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಂದೇಶ ನೀಡಿದ ಅವರು,


ಜನತೆಗೆ ಶುಭ ಕೋರಿದರು. ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದಂತೆ ದೇಶದಲ್ಲಿ ಅಮೃತ ಕಾಲ ಆರಂಭವಾಗಿದೆ. 2047ರ ಹೊತ್ತಿಗೆ ನಮ್ಮ ದೇಶವು ವಿಶ್ವದ ಅತ್ಯಂತ ಸಶಕ್ತ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಂಕಲ್ಪ ಮತ್ತು ಛಲದೊಂದಿಗೆ ನಾವು ನಮ್ಮ ದೇಶವನ್ನು ಮುನ್ನಡೆಸಬೇಕಿದೆ ಎಂದು ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಧ್ವಜಾರೋಹಣ ಮಾಡಿದರು. ಮಾಜಿ ಸಚಿವ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ಕೇಶವ್ ಪ್ರಸಾದ್, ಜಗದೀಶ್ ಹಿರೇಮನಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಮುಖಂಡ ಎಂ.ಡಿ.ಲಕ್ಷ್ಮೀನಾರಾಯಣ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ ಮಂಜುನಾಥ್ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಅವರು ಉಪಸ್ಥಿತರಿದ್ದರು.