ಬಿಜೆಪಿ ವತಿಯಿಂದ ಪಂಜಿನ ಮೆರವಣಿಗೆ


ಬೆಂಗಳೂರು: ಬಿಜೆಪಿ ಬೆಂಗಳೂರು ಉತ್ತರ ಜಿಲ್ಲೆ ವತಿಯಿಂದ ವಿಭಜನ, ವಿಭೀಷಕ ಸ್ಮøತಿ ದಿವಸ ಕಾರ್ಯಕ್ರಮದ ಅಂಗವಾಗಿ ಇಂದು ಸಂಜೆ ಹೆಬ್ಬಾಳ ಗೆದ್ದಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಪಂಜಿನ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಮಂಡಲ ಕಾರ್ಯಾಲಯದ ವರೆಗೆ ಈ ಮೆರವಣಿಗೆ ನಡೆಯಿತು. ದೇಶ ವಿಭಜನೆ ಸಂದರ್ಭದಲ್ಲಿ ನಡೆದ ಕರಾಳ ದುರ್ಘಟನೆಯ ಸಂತಾಪ ಕಾರ್ಯಕ್ರಮ ಇದಾಗಿತ್ತು. ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಉತ್ತರ ಜಿಲ್ಲಾ ಅಧ್ಯಕ್ಷ ನಾರಾಯಣ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.