ವಾರ್ತಾ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ ದಿನ ಆಚರಣೆ
ಬೆಂಗಳೂರು,ಆ.15 (ಕರ್ನಾಟಕ ವಾರ್ತೆ): 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆವರಣದಲ್ಲಿ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಧ್ವಜಾರೋಹಣ ನೆರವೇರಿಸಿ, ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಬ್ರೀಟೀಷರ ಆಳ್ವಿಕೆಯ ಸಮಯದಲ್ಲಿ, ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಗಣ್ಯರ ಹೋರಾಟ, ತ್ಯಾಗ, ಬಲಿದಾನಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರುಗಳಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವಪ್ಪ.ಜಿ.ಬಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.