ಅಗಸ್ಟ್ ೧೮ ರಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಂಕಿತ ಪುರಸ್ಕಾರ ಪ್ರದಾನ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಅಗಸ್ಟ್ ೧೮ ಶುಕ್ರವಾರ ಸಂಜೆ ೫.೦೦ ಗಂಟೆಗೆ ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ ʻಅಂಕಿತ ಪುಸ್ತಕ ಪುರಸ್ಕಾರʼ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದೆ.ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ. ಸತೀಶಕುಮಾರ ಎಸ್.ಹೊಸಮನಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಲೇಖಕ ಹಾಗೂ ಪತ್ರಕರ್ತರಾದ ಶ್ರೀ ಗಿರೀಶ್ರಾವ್ ಹತ್ವಾರ್ (ಜೋಗಿ) ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ದತ್ತಿ ದಾನಿಗಳಾಗಿರುವ ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆಯ ಶ್ರೀ ಪ್ರಕಾಶ ಕಂಬತ್ತಳ್ಳಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.ʻಶಿವಮೊಗ್ಗ ಜಿಲ್ಲೆಯ, ಸಾಗರದ ರವೀಂದ್ರ ಪುಸ್ತಕಾಲಯಕ್ಕೆʼ ೨೦೨೨ನೆಯ ಸಾಲಿನ ಹಾಗೂ ಬೆಂಗಳೂರಿನ ʻಛಂದ ಪುಸ್ತಕʼ ಸಂಸ್ಥೆಗೆ ೨೦೨೩ ನೆಯ ಸಾಲಿನ ಅಂಕಿತ ಪುಸ್ತಕ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.
