ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ ಎ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು, ಆಗಸ್ಟ್ 17 (ಕರ್ನಾಟಕ ವಾರ್ತೆ):ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್’ಎ’ ವೃಂದದ 16 (ಫಾರೆಸ್ಟ್ರಿ- 08 ಮತ್ತು ನಾನ್ -ಫಾರೆಸ್ಟ್ರಿ -08) ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮತ್ತು ಕಟ್ ಆಫ್ ಅಂಕಗಳ ಪಟ್ಟಿಯನ್ನು ಆಗಸ್ಟ್ 16 ರಂದು ಆಯೋಗದ ಜಾಲತಾಣ http://kpsc.kar.nic.in/lists/cut off marks ನಲ್ಲಿ ಪ್ರಕಟಿಸಲಾಗಿದೆ.ಈ ಆಯ್ಕೆಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟವಾದ 07 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು – 560001, ಅಥವಾ ಇ-ಮೇಲ್ kpsc-ka@nic.in ಮುಖಾಂತರವು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಹಾಗೂ ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *