ಬೃಹತ್ ಉಚಿತ ಆರೋಗ್ಯ ಶಿಬಿರ

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾ ನಗರದಲ್ಲಿ ಉಚಿತ ಬೃಹತ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು.


ನಿಕಟಪೂರ್ವ ಬಿಬಿಎಂಪಿ ಆಡಳಿತ ಪಕ್ಷದ ನಾಯಕರು ಹಾಗೂ ಬಿಬಿಎಂಪಿ ಮಾಜಿ ಸದಸ್ಯರಾದ ಎಂ,ಶಿವರಾಜ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಆರೋಗ್ಯ ಶಿಬಿರದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಶಿಬಿರಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು ಇಂದು ಈ ಶಿಬಿರವನ್ನು ಆಯೋಜನೆ ಮಾಡಿರುವ ಬಿಬಿಎಂಪಿ ಮಾಜಿ ಸದಸ್ಯರಾದ ಎಂ ಶಿವರಾಜ್ ಅವರು ಈ ಭಾಗದಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಈಗಾಗಲೇ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿಯ ಉಚಿತ ಬೃಹತ್ ಆರೋಗ್ಯ ಶಿಬಿರದಲ್ಲಿ ಹಲವು ಉಚಿತ ಚಿಕಿತ್ಸೆಗಳು ಲಭ್ಯ ಇವೆ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದ ದಿನೇಶ್ ಗುಂಡೂರಾವ್ ಅವರು ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಅಧಿಕಾರಕ್ಕೆ ಬಂದಿದ್ದು, ಬಡವರ ದಿನ ದಲಿತರ ಪರವಾಗಿ 5 ಗ್ಯಾರಂಟಿ ಯೋಜನೆ ಗಳಾದ ಗೃಹ ಲಕ್ಷ್ಮಿ,ಗೃಹ ಜ್ಯೋತಿ, ಶಕ್ತಿ ಯೋಜನೆ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಉಚಿತ ಅಕ್ಕಿ ನೀಡುವುದು ಪದವೀಧರ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಯಡಿ ಸಹಾಯ ಧನ ಸೇರಿದಂತೆ ಹಲವು ಪ್ರಮುಖ ಯೋಜನೆಗಳನ್ನ ಕಾಂಗ್ರೆಸ್ ಪಕ್ಷ ಈಗಾಗಲೇ ಜಾರಿ ಮಾಡಿದೆ. ನಮ್ಮದು ಜನಸಾಮಾನ್ಯರ ಪಕ್ಷ ಜನಸಾಮಾನ್ಯ ರ ರಕ್ಷಣೆಗೆ ದಿನದ 24 ಗಂಟೆ ಸೇವೆ ಮಾಡಲು ಸಿದ್ದ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಂತರ ಮಾತನಾಡಿದ ಮಾಜಿ ಬಿಬಿಎಂಪಿ ಸದಸ್ಯರಾದ ಎಂ ಶಿವರಾಜ್ ಅವರು ಇಂದಿನ ಆರೋಗ್ಯ ಶಿಬಿರ ಕಾರ್ಯಕ್ರಮಕ್ಕೆ ನಮ್ಮ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆಗಮಿಸಿ ನಮಗೆ ಮತ್ತಷ್ಟು ಶಕ್ತಿ ತುಂಬಿದ್ದಾರೆ. ಸಚಿವರ ಸಹಕಾರದಿಂದ ಉಚಿತ ಔಷಧಿ ಸೇರಿದಂತೆ ಇಲಾಖೆಯ ಮಟ್ಟದಲ್ಲಿ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಹೀಗಾಗಿ ತಾವೆಲ್ಲರೂ ಇಲ್ಲಿ ಲಭ್ಯವಿರುವ ಎಲ್ಲ ಬಗೆಯ ಉಚಿತ ಸಲಹೆ ಹಾಗೂ ಚಿಕಿತ್ಸೆ ಗಳನ್ನು ಪಡೆದು ಉತ್ತಮ ಆರೋಗ್ಯ ಯುತ ಜೀವನ ನಡೆಸಿರಿ ಎಂದು ಹೇಳಿದರು. ಪ್ರಾಸ್ತಾವಿಕ ವಾಗಿ ಮಾತನಾಡಿದ ಬಿಬಿಎಂಪಿ ಮಾಜಿ ಸದಸ್ಯರಾದ ಕೇಶವ ಮೂರ್ತಿ ಅವರು ನಮ್ಮ ಕ್ಷೇತ್ರದಲ್ಲಿ ಎಲ್ಲ ರೀತಿಯ ಜನಪರ ಕಾರ್ಯಕ್ರಮಗಳನ್ನು ಈಗಾಗಲೇ ಮಾಡಿಕೊಂಡು ಬರುತಿದ್ದೇವೆ ಇಂದು ಈ ಉಚಿತ ಆರೋಗ್ಯ ತಪಾಸಣೆ ಶಿಬಿರ ಜನರ ಉತ್ತಮ ಆರೋಗ್ಯಕ್ಕೆ ಸಹಕಾರಿ ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳಿ ನಾವು ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ನಮ್ಮ ಈ ಶಿಬಿರಕ್ಕೆ ತಾವು ಬರ್ಬೇಕು ಎಂದು ಕೇಳಿದಾಗ ಸಂತೋಷದಿಂದ ಬಂದು ನೆರವೇರಿಸಿ ಕೊಟ್ಟಿದ್ದಾರೆ. ಇವರ ತಂದೆಯವರಾದ ಆರ್ ಗುಂಡೂರಾವ್ ಅವರು ನಮ್ಮ ರಾಜಕೀಯ ಜೀವನದ ಗುರುಗಳಾದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹಲವು ಫಲಾನುಭವಿಗಳಿಗೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಗಳ ಮೆಡಿಕಲ್ ಸಹಾಯಧನ ಚೆಕ್ ವಿತರಣೆ ಹಾಗೂ ವಿಕಲಚೇತನರಿಗೆ ವಾಕರ್,ವಾಕಿಂಗ್ ಸ್ಟಿಕ್ ಗಳನ್ನು ಸಚಿವ ದಿನೇಶ್ ಗುಂಡೂರಾವ್ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಪುಟ್ಟ ಸ್ವಾಮಿ ಗೌಡ್ರು, ನರಸಿಂಹಮೂರ್ತಿ, ಮೋಹನ್ ಕುಮಾರ್ ,ಶಿವಕುಮಾರ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಸುಧೀಂದ್ರ,ನಟರಾಜ್, ಮಲ್ಲಿಕಾ, ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳಾದ ಮೋನರಂಜನ್ ಹೆಗ್ಡೆ, ಬಾಲಸುಂದರ್, ಮಂಜುಳಾ, ವಾರ್ಡ್ ಅಧ್ಯಕ್ಷರಾದ ಶ್ರೀನಿವಾಸ್, ಚಂದ್ರ ಕಾಶಿಂ, ಮಹೇಶ್, ಗಂಗಾಧರ್ ಉಪಸ್ಥಿತರಿದ್ದರು.
ಬಿಬಿಎಂಪಿ ಹಾಗೂ ಸೋಲಂಕಿ ಐ ಹಾಸ್ಪಿಟಲ್,ಸಹಯೋಗದಲ್ಲಿ ನಡೆದ ಈ ಆರೋಗ್ಯ ಶಿಬಿರದಲ್ಲಿ ಹಲವು ಪ್ರಮುಖ ಆಸ್ಪತ್ರೆಗಳು ಭಾಗವಹಿಸಿದ್ದವು.

Leave a Reply

Your email address will not be published. Required fields are marked *