ಜನತಾ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷರಾಗಿ ಎ.ರಾಜ್

ನಗರದ ಶೇಷಾದ್ರಿಪುರ ಮುಖ್ಯ ರಸ್ತೆಯಲ್ಲಿರುವ ಜನತಾ ಪಕ್ಷ ಕರ್ನಾಟಕ ರಾಜ್ಯದ ಕೇಂದ್ರ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಪಕ್ಷದ ರಾಜ್ಯಾಧ್ಯಕ್ಷರಾದ ಕೆ.ಎಂ.ಪಾಲಾಕ್ಷ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ಘಟಕಕ್ಕೆ ನೂತನ ಅಧ್ಯಕ್ಷರಾಗಿ ಎ.ರಾಜ್ ಹಾಗೂ ಪದಾಧಿಕಾರಿಗಳ ಪದಗ್ರಹಣವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಘಟನಾ

ಕಾರ್ಯದರ್ಶಿ ಅಬ್ದುಲ್ ರೌಫ್, ರಾಷ್ಟ್ರೀಯ ಮುಖಂಡರು ವಾಣಿ ಎನ್. ಶೆಟ್ಟಿ, ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ನಾಗೇಶ್ ಎನ್., ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ಉಸ್ತುವಾರಿ ಎಚ್. ಎ. ಈಶ್ವರ್, ರಾಜ್ಯ ಯುವ ಘಟಕ ಅಧ್ಯಕ್ಷರು ಭರತ್ ಜೆ. ಮುಂತಾದ ಪ್ರಮುಖರು ಉಪಸ್ಥಿತರಿದ್ದರು. ಇದೇ ವೇಳೆ ಸಾರ್ವಜನಿಕ ರಕ್ತದಾನ, ನೇತ್ರದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಸಹ ಏರ್ಪಡಿಸಲಾಗಿತ್ತು. ಆರೋಗ್ಯ ತಪಾಸಣಾ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತು ಶಿಬಿರದ ಲಾಭವನ್ನು ಹೆಚ್ಚು ಜನ ಪಡೆದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *