ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ’ದಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ

ಸೆಪ್ಟೆಂಬರ್ 13 ರಂದು ಬೆಂಗಳೂರಿನಲ್ಲಿ ‘ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ’ದಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯೂ..! —

‘ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘ’ದಿಂದ ಸೆಪ್ಟೆಂಬರ್ 13 ರಂದು ಬೆಳಗ್ಗೆ 11 ಗಂಟೆಗೆ ನಗರದ ಕುಮಾರಕೃಪ ರಸ್ತೆಯ ಶಿವಾನಂದ ವೃತ್ತದ ಗಾಂಧಿ ಭವನದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ..!

ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹಾದೇವಪ್ಪ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಪ್ರಶಸ್ತಿ ಪ್ರದಾನವನ್ನು ಮಾಡಲಿದ್ದಾರೆ..!

ವಿಶೇಷ ಪ್ರಶಸ್ತಿ ಪುರಸ್ಕೃತರೂ..! —

ದಿ.ಜಿ.ರಾಚಯ್ಯ ದತ್ತಿ ಪ್ರಶಸ್ತಿ-2023ಯೂ..! —

ದಿನೇಶ್ ಅಮೀನ್‌ ಮಟ್ಟು, ಹಿರಿಯ ಪತ್ರಕರ್ತರು, ಮಾಧ್ಯಮ ತಜ್ಞರು..!

ವಾರ್ಷಿಕ ಪ್ರಶಸ್ತಿ ಪುರಸ್ಕೃತರು

ಸಿ. ಮುನಿಯಪ್ಪ, ಸಂಪಾದಕರು, ‘ಸಂಚಿಕೆ’, ಕೋಲಾರ.

ಮಾಳಪ್ಪ ಅಡಸಾರೆ, ಸಂಪಾದಕರು, ‘ಸಂಜೆ ಸುದ್ದಿ ಅಂತರಂಗ’, ಬೀದರ್‌.

ಡಿ.ಎನ್‌. ಮೈಲಾರಪ್ಪ, ಸಂಪಾದಕರು, ‘ಜನಸಾಗರ’, ಚಿತ್ರದುರ್ಗ.

ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ..!

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕರು ಹಾಗೂ ಅನುಸೂಚಿತ ಜಾತಿ, ಪಂಗಡಗಳ ಕಲ್ಯಾಣ ಸದನ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕ‌ರ್, ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ,

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಜಯರಾಂ, ಆಯುಕ್ತ ಹೇಮಂತ ನಿಂಬಾಳ್ಕರ್ (ಐಪಿಎಸ್), ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾದ ಶಿವಾನಂದ ತಗಡೂರು, ಶ್ರೀಲಂಕಾದ ‘ಏಷಿಯನ್ ಮೀಡಿಯಾ ಕಲ್ಚರಲ್ ಅಸೋಸಿಯೇಷನ್‌’ನ ಭಾರತೀಯ ಸಂಚಾಲಕ ಎಚ್.ಬಿ.ಮದನಗೌಡ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕ‌ರ್‌ ಭಾಗವಹಿಸಲಿದ್ದಾರೆ..!

ಸನ್ಮಾನಿತರೂ..! —

ಮಾಜಿ ಶಾಸಕ, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಮಾಜಿ ಅಧ್ಯಕ್ಷರಾದ ನೆಹರು ಚ.ಓಲೇಕಾರ, ಎಸ್‌ಸಿಪಿ-ಟಿಎಸ್‌ಪಿ ಯೋಜನೆ ಸಲಹೆಗಾರ ಇ.ವೆಂಕಟಯ್ಯ, ‘ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ’ ಪುರಸ್ಕೃತರಾದ ಸೋಮಶೇಖರ ಕೆರಗೋಡು, ಸಚೇಂದ್ರ ವೈ.ಲಂಬು, ಶಿವರಾಯ ದೊಡ್ಮನಿ, ಕಸಾಪ ಡಾ.ಸಿದ್ದಲಿಂಗಯ್ಯ ದತ್ತಿ ಪ್ರಶಸ್ತಿ ಪುರಸ್ಕೃತರಾದ ನಾಗರಾಜ ಹೆತ್ತೂರು ಅವರನ್ನು ಸನ್ಮಾನಿಸಲಾಗುತ್ತದೆ..!

ಕೆ.ಶಿವು.ಲಕ್ಕಣ್ಣವರ

Leave a Reply

Your email address will not be published. Required fields are marked *