ಮುಖ್ಯಮಂತ್ರಿ ನೇತೃತ್ವದಲ್ಲಿ ದಿಲ್ಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಸಭೆ: ಡಿಕೆ ಶಿವಕುಮಾರ್
ಬೆಂಗಳೂರು: ಕಾವೇರಿ ನದಿ ನೀರು ವಿಚಾರವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾಳೆ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಸಭೆ ಕರೆಯಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ದೆಹಲಿಗೆ ಹೊರಡುವ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾವೇರಿ ನದಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರನ್ನು ಭೇಟಿ ಮಾಡಲು ಮುಖ್ಯಮಂತ್ರಿ ನಾನು, ಸಿಎಂ ಸಿದ್ದರಾಮಯ್ಯ, ಸಚಿವರಾದ ಚೆಲುವರಾಯಸ್ವಾಮಿ, ಮಹದೇವಪ್ಪ, ಹೆಚ್.ಕೆ ಪಾಟೀಲ್ ಹಾಗೂ ರಾಜ್ಯದ ಪ್ರತಿನಿಧಿಗಳು ದೆಹಲಿಗೆ ತೆರಳುತ್ತಿದ್ದೇವೆ ಎಂದರು.ನಾಳೆ ಎಲ್ಲಾ ಸಂಸದರ ಸಭೆ ನಡೆಯಲಿದ್ದು, ರಾಜ್ಯದ ರೈತರ ಹಿತ ಕಾಯಲು ಅಗತ್ಯ ಕೆಲಸ ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.