ಹಿರಿಯರ ಮೌಲ್ಯಯುತ ಜೀವನ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ


ಬೆಂಗಳೂರು, ಅಕ್ಟೋಬರ್ 01 (ಕರ್ನಾಟಕ ವಾರ್ತೆ) :
ಹಿರಿಯರ ಮೌಲ್ಯಯುತ ಜೀವನ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕವಾಗಿದ್ದು, ಪ್ರತಿಯೊಬ್ಬರೂ ವಿಶ್ವ ಮಾನವರಾಗಿ  ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ವಿಶ್ವ ಹಿರಿಯ ನಾಗರಿಕರ ದಿನಾಚರu”É ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕøತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.

ನಮ್ಮ ಸಮಾಜದಲ್ಲಿ ಅನೇಕ ಜಾತಿ, ಧರ್ಮಗಳಿವೆ. ಎಲ್ಲರನ್ನೂ ಪ್ರ್ರೀತಿ – ವಿಶ್ವಾಸದಿಂದ ಕಾಣುವುದು ಮನುಷ್ಯತ್ವ. ವಿಶ್ವಮಾನವರಾಗಬೇಕಾದರೆ ಮನುಷ್ಯತ್ವ ಬಹಳ ಮುಖ್ಯ. ಮನುಷ್ಯರಾಗಿ ಬಾಳುವುದು ಜೀವನದ ಗುರಿಯಾಗಬೇಕು. ಸಂವಿಧಾನ ಬಗ್ಗೆ ತಿಳಿದು ಅರ್ಥೈಸಿಕೊಂಡರೆ ಶಾಂತಯುತ ಜೀವನ ನಡೆಸಲು ಸಾಧ್ಯವಾಗುತ್ತದೆ. ಸಂವಿಧಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಹಿಷ್ಣತೆ ಕುರಿತು ಎಲ್ಲರೂ ಒಟ್ಟಾಗಿ ಬಾಳಬೇಕು ಎಂದು ತಿಳಿಸಿದ್ದಾರೆ. ಇದನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡರೆ ವಿಶ್ವಮಾನವರಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.

ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಜೀವನ ನಡೆಸುವುದು ಮುಖ್ಯವಾಗುತ್ತದೆ. ಪ್ರಶಸ್ತಿ ಪುರಸ್ಕøತರೆಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂದು ಮೆಚ್ಚುಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್‍ನಲ್ಲಿ ಹೆಚ್ಚಿಸಲಾಗುವುದು ಎಂದು  ಭರವಸೆ ನೀಡಿದರು.

ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಅಕ್ಟೋಬರ್ 1 ರಂದು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಾವು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಹಿರಿಯರ ಅನುಭವ ಯುವ ಪೀಳಿಗೆಗೆ ಬಹಳ ಮುಖ್ಯವಾಗಿದ್ದು, ಅವರ ಅನುಭವದ ಮಾತುಗಳು ನಮಗೆ ಮಾರ್ಗದರ್ಶನವಾಗುತ್ತದೆ. ತಂದೆ – ತಾಯಿಯರಿಗೆ ಗೌರವ ನೀಡುವವರು ಜೀವನದಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳಿದರು.

ವೃದ್ದಾಪ್ಯದಲ್ಲಿ ಬರಬಹುದಾದ ಕಷ್ಟಗಳನ್ನು ಪರಿಹರಿಸಲು ಸಾಧ್ಯವಾಗುವಂತಹ ಎಲ್ಲಾ ಪ್ರಯತ್ನಗಳನ್ನು ಸರ್ಕಾರ ಮಾಡುತ್ತಿದ್ದು, ಅನೇಕ ಯೋಜನೆಗಳು, ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ರಾಜ್ಯದಲ್ಲಿ 58 ಲಕ್ಷ ಹಿರಿಯ ನಾಗರಿಕರಿದ್ದು, ಅವರಲ್ಲಿ 49 ಲಕ್ಷ ಹಿರಿಯ ನಾಗರಿಕರು ವೃದ್ದಾಪ್ಯ ವೇತನ ಪಡೆಯುತ್ತಿದ್ದಾರೆ. ಪ್ರಸ್ತುತ 1,200 ರೂಪಾಯಿಗಳ ವೃದ್ದಾಪ್ಯವೇತನ ನೀಡುತ್ತಿದ್ದು,  ಈ ವೃದ್ದಾಪ್ಯ ವೇತನವನ್ನು 2000 ರೂಪಾಯಿಗಳಿಗೆ ಏರಿಕೆ ಮಾಡಿದರೆ ಹಿರಿಯ ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ವೃದ್ದಾಪ್ಯ ಕೇಂದ್ರಗಳಲ್ಲಿ ಕೆಲವು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು. ಪ್ರತಿಯೊಂದು ಜಿಲ್ಲೆಯಲ್ಲಿ ಹಗಲು ಯೋಗಕ್ಷೇಮ ಕೇಂದ್ರ, ಆರೋಗ್ಯ ಕೇಂದ್ರ ಮತ್ತು ಕ್ರೀಡಾ ಚಟುವಟಿಕೆಗಳನ್ನು ಒಂದೇ ಸೂರಿನಡಿ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ. 40 ರಷ್ಟು ಅನುದಾನದಲ್ಲಿ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕøತÀ ಹರೇಕಳ ಹಾಜಪ್ಪ, ಕಾನೂನು ಕ್ಷೇತ್ರದಲ್ಲಿ ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಕ್ರೀಡಾ ಕ್ಷೇತ್ರದಲ್ಲಿ ಯೋಗಪಟು ಡಿ.ನಾಗರಾಜ್, ಕಲಾ ಕ್ಷೇತ್ರದಲ್ಲಿ ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ಶಿಕ್ಷಣ ಕ್ಷೇತ್ರದಲ್ಲಿ ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಾ ಕ್ಷೇತ್ರದಲ್ಲಿ ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ಸಾಹಿತ್ಯ ಕ್ಷೇತ್ರದಲ್ಲಿ ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್, ರಾಯಚೂರು ಜಿಲ್ಲೆಯ ಸಿಂಧನೂರು ಶ್ರೀಮಠ ಸೇವಾ ಟ್ರಸ್ಟ್‍ನ್ನು ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಇಲಾಖೆಯ ಸರ್ಕಾರದ ಯೋಜನೆಗಳನ್ನು ಒಳಗೊಂಡ ಕಿರುಚಿತ್ರವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಜೆ.ಸಿ.ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ ಸೇರಿದಂತೆ ಹಿರಿಯ ಗಣ್ಯರು, ಹಿರಿಯ ನಾಗರಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *