ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಿದ ರಾಜೀವ್ ಗೌಡ

ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್
ವಾರ್ತಾಜಾಲ ಶಿಡ್ಲಘಟ್ಟ

ಅಂಗವಿಕಲ ಮಕ್ಕಳಲ್ಲಿ ಅಗಾಧವಾದ ಬುದ್ದಿ ಮತ್ತು ಜ್ಞಾಪಕ ಶಕ್ತಿ ಹೆಚ್ಚಿರುತ್ತದೆ. ಅದನ್ನು ಗುರ್ತಿಸಿ ಅವರಿಗೆ ಮುಖ್ಯವಾಹಿನಿಯಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಹೇಳಿದರು. ನಗರದಲ್ಲಿನ ಆಶಾಕಿರಣ ಅಂಧ ಮಕ್ಕಳ ವಸತಿ ಶಾಲೆಯಲ್ಲಿ ಸೋಮವಾರ ಗಾಂಧೀಜಿ ಮತ್ತು ಶಾಸ್ತ್ರಿ ಅವರ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.

ಶಿಡ್ಲಘಟ್ಟ ನಗರದ ಆಶಾಕಿರಣ ಅಂಧ ಮಕ್ಕಳ ವಸತಿ ಶಾಲೆಯಲ್ಲಿ ನಡೆದ ಗಾಂಧೀಜಿ ಮತ್ತು ಶಾಸ್ತ್ರಿ ಜಯಂತಿಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಆರ್ಥಿಕ ನೆರವು ನೀಡಲಾಯಿತು. ಕಲೆ, ಸಾಹಿತ್ಯ, ಸಿನಿಮಾ, ಕ್ರೀಡೆ ಕ್ಷೇತ್ರ ಸೇರಿದಂತೆ ನಾನಾ ರಂಗಗಳಲ್ಲಿ ಅಂಧ ಮಕ್ಕಳು, ಅಂಗವಿಕಲರು ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಮಕ್ಕಳ ಆಸಕ್ತಿಗೆ ತಕ್ಕಂತೆ ಅವಕಾಶ, ಪ್ರೋತ್ಸಾಹ ಸಹಕಾರ ನೀಡುವುದು ಬಹಳ ಮುಖ್ಯ ಎಂದರು.

ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ 15 ಮಂದಿ ಅಂಗವಿಕಲ ವಿದ್ಯಾರ್ಥಿಗಳಿಗೆ ಎಬಿಡಿ ಟ್ರಸ್ಟ್‌ ನಿಂದ ನಗದು ಪುರಸ್ಕಾರ ನೀಡಲಾಯಿತು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಎ.ನಾಗರಾಜ್‌, ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಹನಾ ರಾಜೀವ್‌ಗೌಡ, ಚಿಲಕಲನೇರ್ಪು ಬ್ಲಾಕ್ ಅಧ್ಯಕ್ಷ ಕೃಷ್ಣಾರೆಡ್ಡಿ, ನಗರಸಭೆ ಉಪಾಧ್ಯಕ್ಷ ಅಪ್ಸರ್‌ಪಾಷ, ಗುಡಿಹಳ್ಳಿ ನಾರಾಯಣಸ್ವಾಮಿ, ನಗರಸಭೆ ಸದಸ್ಯ ಮಂಜುನಾಥ್, ಕೃಷ್ಣಮೂರ್ತಿ, ನರೇಂದ್ರ, ಅನೂರು ರವಿಗೌಡ. ದೇವರಮಳ್ಳೂರು ರವಿ, ಬೆಳ್ಳೂಟಿ ರಾಜಣ್ಣ, ಗೋಪಾಲ್, ಜಗದೀಶ್‌ ಮತ್ತಿತರರಿದ್ದರು.

Leave a Reply

Your email address will not be published. Required fields are marked *