ಸಚಿವ ದಿನೇಶ್ ಗುಂಡೂರಾವ್ ರವರಿಗೆ ಬೆಳ್ಳಿ ಗದೆ ನೀಡಿ ಸನ್ಮಾನ

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸುಭಾಶ್ ನಗರ ವಾರ್ಡ್ ನಲ್ಲಿ ಟಿ.ಮಲ್ಲೇಶ್ ಸಾಮಾಜಿಕ ಸೇವಾ ಸಂಸ್ಥೆ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಸನ್ಮಾನ ಕಾರ್ಯಕ್ರಮ.

ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕುಮಾರಿ ಆನನ್ಯಾ ರಾವ್ ರವರು ,ಮಾಜಿ ಮಹಾನಗರ ಪಾಲಿಕೆ ಸದಸ್ಯ ಟಿ.ಮಲ್ಲೇಶ್ ರವರು ಬೆಳ್ಳಿಗದೆ ನೀಡಿ ಸನ್ಮಾನಿಸಿದರು.

ಈ ಶುಭಾ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಆಟೋ ಚಾಲಕರಿಗೆ ಸಮವಸ್ತ್ರ ಹಾಗೂ ಮಹಿಳೆಯರಿಗೆ ಕಂಬಳಿ ಮತ್ತು ಯುವ ಕ್ರೀಡಾಪಟುಗಳಿಗೆ ಸ್ಪೊರ್ಟ್ ಕಿಟ್ ಗಳನ್ನು ವಿತರಿಸಲಾಯಿತು.

ಸಚಿವರಾದ ದಿನೇಶ್ ಗುಂಡೂರಾವ್ ರವರು ಮಾತನಾಡಿ ಅಧಿಕಾರಿ ಸಿಕ್ಕಾಗ ಜನರಿಗೆ ಒಳ್ಳೆಯ ಸೇವೆ ಮಾಡಬೇಕು.

ಜನರ ಪ್ರೀತಿ ವಿಶ್ವಾಸಕ್ಕೆ ನಾನು ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ.

ಸ್ಲಂ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ಹಾಗೂ ನೊಂದಣಿ ಮಾಡಿಕೊಡಲು ಹಾಗೂ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ರೈಲ್ವೆ ಅಧಿಕಾರಿಗಳ ಜೊತೆಯಲ್ಲಿ ಚರ್ಚೆ ಅನುದಾನ ಮೀಸಲು ಇಡಲಾಗಿದೆ.

ಸರ್ಕಾರದ ಗ್ಯಾರಂಟಿ ಯೋಜನೆ ಪ್ರತಿ ಕುಟುಂಬಗಳಿಗೆ ತಲುಪಿದೆ ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಬಡವರ ಪಾಲಿಗೆ ಆಶಾದೀಪವಾಗಿದೆ.

ಒಳ್ಳೆಯ ಶಿಕ್ಷಣ ಮತ್ತು ಆರೋಗ್ಯ ಪ್ರತಿಯೊಬ್ಬರಿಗೂ ಲಭಿಸಬೇಕು ಮತ್ತು ಕಾಂಗ್ರೆಸ್ ಪಕ್ಷ ಬಡವರ ಪರ, ಅವರಿಗೆ ಸಹಾಯ ಮಾಡುವ ಸರ್ಕಾರವಾಗಿದೆ ಎಂದು ಹೇಳಿದರು.

ಮಾಜಿ ಪಾಲಿಕೆ ಸದಸ್ಯ ಟಿ.ಮಲ್ಲೇಶ್ ರವರು ಮಾತನಾಡಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಸರಳ, ಸಜ್ಜನ ರಾಜಕಾರಣಿ ಎಂದು ರಾಜ್ಯದಲ್ಲಿ ಕೀರ್ತಿ ಪಡೆದಿದ್ದಾರೆ .6ಬಾರಿ ಶಾಸಕರಾಗಿ ಉತ್ತಮ ಸೇವೆ ಮಾಡಿದ್ದಾರೆ.

ನುಡಿದಂತೆ ನಡೆದ ಕಾಯಕಯೋಗಿ ಸಚಿವರಾದ ದಿನೇಶ್ ಗುಂಡೂರಾವ್ ರವರು ರೈಲ್ವೆ ಅಂಡರ್ ಪಾಸ್ ಹಾಗೂ ಹಕ್ಕುಪತ್ರ ಹಾಗೂ ಸ್ಲಂ ನಿವಾಸಿಗಳಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಂಡಿದ್ದಾರೆ.

ದಿನೇಶ್ ಗುಂಡೂರಾವ್ ರವರು ಮಂತ್ರಿಯಾಗಿ ಉತ್ತಮ ಸೇವೆ ಮಾಡುತ್ತಿದ್ದಾರೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಲಿ ಎಂದು ರಾಜ್ಯದ ಜನರ ಆಶಯವಾಗಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸರವಣನ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಅಡಪ್ಪ, ನಾರಾಯಣಸ್ವಾಮಿ, ಭಾನು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *