ವಿದುಷಿ ಶ್ರೀಮತಿ ಸಂಧ್ಯಾ ಶ್ರೀನಾಥ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ

ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನವೆಂಬರ್ 9, ಗುರುವಾರ ಸಂಜೆ ಏರ್ಪಡಿಸಲಾಗಿತ್ತು.

ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಸಂಧ್ಯಾ ಶ್ರೀನಾಥ್ ಅವರ ಶಿಷ್ಯೆಯರಾದ ಕು|| ನಿಧಿಶ್ರೀ ಮತ್ತು ಕು|| ಹಿಮಜಾ ಇವರುಗಳು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತ ಪಡಿಸಿದರು. ಇವರ ಗಾಯನಕ್ಕೆ ಶ್ರೀ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಶ್ರೀ ಶ್ರೀನಿವಾಸ ಕಾಖಂಡಕಿ ತಬಲಾ ವಾದನದಲ್ಲಿ ಸಾಥ್ ನೀಡಿದರು.

Leave a Reply

Your email address will not be published. Required fields are marked *