ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿರುವರು.
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಜೆಪಿ ನಡ್ಡಾರವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ನಡ್ಡಾ ರಾಜ್ಯಸಭೆಯಲ್ಲಿ ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸಿದರು. ಈ ವರ್ಷದ ಏಪ್ರಿಲ್‌ನಲ್ಲಿ ಅಧಿಕಾರದ ಅ ವಧಿಮುಕ್ತಾಯಗೊಳ್ಳಲಿದೆ. ಇವರೊಂದಿಗೆ ಇತರ 57 ರಾಜ್ಯಸಭಾ ಸದಸ್ಯರ ಅವಧಿಯೂ ಕೊನೆಗೊಳ್ಳಲಿದೆ. ಬಿಜೆಪಿ ಸರ್ಕಾರ ಇತ್ತೀಚೆಗೆ ಗುಜರಾತ್‌ನಿಂದ ರಾಜ್ಯಸಭೆಗೆ ನಡ್ಡಾರನ್ನು ನಾಮನಿರ್ದೇಶನ ಮಾಡಿದೆ. ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸುವ ರಾಜ್ಯಸಭಾ ಸ್ಥಾನಕ್ಕೆ ನಡ್ಡಾ ರಾಜೀನಾಮೆ ನೀಡಿದರು. ರಾಜೀನಾಮೆಯನ್ನು ಸಭಾಪತಿ ಅಂಗೀಕರಿಸಿದ್ದಾರೆ0ದು ರಾಜ್ಯಸಭಾ ಕಚೇರಿ ವರದಿಗಳು ತಿಳಿಸಿದೆ.